ಸಂಸದ ಪ್ರತಾಪ‌ ಸಿಂಹಗೆ ಮರಿಗೌಡ ತಿರುಗೇಟು

ManjuHamapura
0


ಮೈಸೂರು: ಕೊಡಗು-ಮೈಸೂರು ಲೋಕಸಭಾ ಸಂಸದ ಪ್ರತಾಪ್‌ ಸಿಂಹ ಅವರು ನಿನ್ನೆ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿರುವುದಕ್ಕೆ ಕೆಪಿಸಿಸಿ ಸದಸ್ಯ, ಜಿಪಂ ಮಾಜಿ ಅಧ್ಯಕ್ಷ, ಸಿಎಂ ಸಿದ್ದರಾಮಯ್ಯ ಅವರ ಆಪ್ತ ಮರಿಗೌಡ ಕೆಂಡಾಮಂಡಲವಾಗಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದಕ್ಕೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಈಡುಗಾಯಿ ಒಡೆದು ಭಕ್ತರಿಗೆ ಸಿಹಿ ಹಂಚಿ ಸಂಭ್ರಮಿಸಿ ಮಾತನಾಡಿ, ಬಿಜೆಪಿ ಅಧಿಕಾರದಲ್ಲಿದ್ದಾಗ ಜನರ ಏಳ್ಗೆಗೆ ಯೋಜನೆಗಳನ್ನು ರೂಪಿಸದೇ ಇದ್ದವರು ಇಂದು ಗ್ಯಾರಂಟಿ ಯೋಜನಗೆಳನ್ನು ಟೀಕಿಸುತ್ತಿದ್ದಾರೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಸಿದವರಿಗೆ ಅನ್ನ ಭಾಗ್ಯದ ಮೂಲಕ ಅನ್ನ ನೀಡಿದ ಪುಣ್ಯಾತ್ಮ ಅವರ ಹಲವು ಯೋಜನಗಳು ಜನರಿಗೆ ತಲುಪಿವೆ. ಅದರಂತೆಯೇ ಪ್ರಸ್ತುತ ಚುನಾವಣೆಯಲ್ಲಿ ರಾಜ್ಯದಲ್ಲಿ  ಅಧಿಕ ಸಂಖ್ಯೆಯಲ್ಲಿ ಕಾಂಗ್ರೆಸ್‌ ಜಯಗಳಿಸಿ 2ನೇ ಅವಧಿಗೆ ಮೈಸೂರು ಭಾಗದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ದೇವರಾಜು ಅರಸರ ನಂತರ ರಾಜಕೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಸಿದ್ದರಾಮಯ್ಯ ಅವರ ವಿರುದ್ಧವಾಗಲಿ, ಕಾಂಗ್ರೆಸ್‌ ಪಕ್ಷದ ವಿರುದ್ಧವಾಗಲಿ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಪ್ರತಾಪ್‌ ಸಿಂಹಗೆ ತಿರುಗೇಟು ನೀಡಿದರು.

ಕಾಂಗ್ರೆಸ್‌ನ ಕಾರ್ಯಕರ್ತರು , ಸಿದ್ದರಾಮಯ್ಯ, ಕೆ.ಮರೀಗೌಡರ ಅಭಿಮಾನಿಗಳು ಇದ್ದರು.

Post a Comment

0Comments
Post a Comment (0)