ಕ್ಷುಲ್ಲಕ‌ ಕಾರಣಕ್ಕೆ ಗೃಹಿಣಿ ನೇಣು

ManjuHamapura
0
ನಂಜನಗೂಡು: ಕ್ಷುಲ್ಲಕ ಕಾರಣಕ್ಕೆ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ದೇವಿರಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

27 ವರ್ಷದ ಪ್ರೀತಿ ಮೃತ ದುರ್ದೈವಿಯಾಗಿದ್ದಾಳೆ.
ಆಕಲ ಗ್ರಾಮದಿಂದ ದೇವರಮ್ಮನಹಳ್ಳಿ ಗ್ರಾಮದ 30 ವರ್ಷದ ಜಗದೀಶ್ ಎಂಬ ವ್ಯಕ್ತಿಗೆ ಐದು ವರ್ಷದ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ನಾಲ್ಕು ವರ್ಷದ ಹೆಣ್ಣು ಮಗುವಿದ್ದು, ನೆನ್ನೆ ಮದುವೆ ಮುಗಿಸಿಕೊಂಡು ಮನೆಗೆ ಬಂದಿದ್ದಾರೆ. ಆಗಾಗ್ಗೆ ಗಂಡ ಹೆಂಡತಿ ನಡುವೆ ಗಲಾಟೆಗಳು ನಡೆಯುತ್ತಿತ್ತು. ಗಂಡ ಹೆಂಡತಿ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಗೃಹಿಣಿ ಬೇಸತ್ತು ಪತಿ ಮನೆಯಿಂದ ಹೊರಗೆ ಹೋದ ಸಂದರ್ಭದಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

 ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಡಿವೈಎಸ್ಪಿ ಗೋವಿಂದರಾಜು, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಶಿವನಂಜಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Post a Comment

0Comments
Post a Comment (0)