ವಿಧಾನ ಪರಿಷತ್ ಸ್ಥಾನಕ್ಕೆ ಶೆಟ್ಟರ್ ಅವಿರೋಧ ಆಯ್ಕೆ

ManjuHamapura
0
ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ  ಪೈಪೋಟಿ ನಡೆದಿದ್ದು, ವಿಧಾನಸಭೆ ಚುನಾವಣೆಯ ನಂತರ ಎಲ್ಲಾ ಮೂರು ಸ್ಥಾನಗಳು ಆಡಳಿತಾರೂಢ ಕಾಂಗ್ರೆಸ್‌  ಪಾಲಾಗಲಿವೆ.  ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ವಿಧಾನಸಭೆ ಚುನಾವಣೆಯ ಟಿಕೆಟ್‌ ವಂಚಿತರು, ಹಿರಿಯ ನಾಯಕರು, ಮಹಿಳಾ ನಾಯಕರು ಸಾಕಷ್ಟು ಲಾಬಿ ನಡೆಸಿದ್ದರು. ಆದರೆ, ಕಾಂಗ್ರೆಸ್‌ ಪಾಳಯದಲ್ಲಿ ನಡೆದ ಚರ್ಚೆಯ ಬಳಿಕ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಸಚಿವ ಬೋಸರಾಜ್ ಹಾಗೂ ತಿಪ್ಪಣ್ಣಪ್ಪ ಕಮಕನೂರ್‌ ಅವರಿಗೆ ಸದಸ್ಯ ಸ್ಥಾನ ಲಭಿಸಿದೆ.

 
ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಗೆ ವಿಧಾನಪರಿಷತ್ ಸ್ಥಾನವನ್ನು ಪಕ್ಷ  ಕಲ್ಪಿಸಿಕೊಟ್ಟಿತ್ತು. ಇದೀಗ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನಿಂದ ಜಗದೀಶ್ ಶೆಟ್ಟರ್, ಸಚಿವ ಬೋಸರಾಜ್ ಹಾಗೂ ತಿಪ್ಪಣ್ಣಪ್ಪ ಕಮಕನೂರ್‌ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ, ಬಿಜೆಪಿಯಿಂದ ಮತ್ತು ಜೆಡಿಎಸ್‌ನಿಂದ ಯಾರೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣದಿಂದಾಗಿ ಕಾಂಗ್ರೆಸ್‌ ನ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಹಾಗೂ ಲಕ್ಷ್ಮಣ್ ಸವದಿ, ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿತ್ತು. ಜೂನ್ 30ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿತ್ತು. ಆದರೆ ಬಿಜೆಪಿ ಹಾಗೂ ಜೆಡಿಎಸ್‌ ನಿಂದ ಯಾರೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣ ಅವಿರೋಧವಾಗಿ ಕಾಂಗ್ರೆಸ್‌ ಪಕ್ಷದ ಮೂವರು ಆಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆ ನಡೆದಿದೆ.

ಅವಿರೋಧವಾಗಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆಯ್ಕೆಯಾ ಬಳಿಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಬೋಸರಾಜ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಶುಕ್ರವಾರ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದರು. ಒಟ್ನಲಿ ಸದ್ಯಕ್ಕೆ ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ 24, ಬಿಜೆಪಿ 34 ಹಾಗೂ ಜೆಡಿಎಸ್ 8 ಸ್ಥಾನವನ್ನು ಹೊಂದಿದೆ. ಒಂದು ಪಕ್ಷೇತರ ಸದಸ್ಯ ಇದ್ದಾರೆ.

Post a Comment

0Comments
Post a Comment (0)